ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ನಾಳೆ ಡಿಸೆಂಬರ್ 3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗೃತ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮೀನುಗಾರರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.