ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿತ್ತು.
ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, 2 ಗಂಟೆಗಳ ಕಾಲ ನೀರಿನಲ್ಲಿ ಹುಡುಕಾಟ ನಡೆಸಿದ ನಂತರ ಮೃತ ದೇಹ ಪತ್ತೆಯಾಗಿದೆ.
ಪ್ರಸಾದ್ ಅವರು ವಿವಾಹಿತರಾಗಿದ್ದು ಪತ್ನಿ, ಓರ್ವ ಪುತ್ರನಿದ್ದಾನೆ. ಘಟನೆ ಬಗ್ಗೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಕಿಶೋರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳುಗಿರುವ ದೇಹ ಹೋರ ತೆಗೆಯಲು ಸ್ಥಳೀಯರು ಸಹಕರಿಸಿದರು.