ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ.
ಕೂಡಲೇ ಸ್ಥಳದಲ್ಲಿದ್ದ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಾನಿಮಾಡಿದ ವ್ಯಕ್ತಿಯನ್ನು ಜಿಡೆಕಲ್ಲು ನಿವಾಸಿ ಸಲಾಂ ಎಂದು ಗುರುತಿಸಲಾಗಿದೆ.
ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.