ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ಮಂಜುನಾಥ ಭಂಡಾರಿಯವರು ಡಿ.7 ರಂದು ಬೆಳಿಗ್ಗೆ 10 ಗಂಟೆಗೆ ಎಪಿಎಂಸಿ ರಸ್ತೆಯ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಗೆ ಆಗಮಿಸಿ, ಕಾರ್ಯಕರ್ತರ ಭೇಟಿ ನಡೆಸಲಿದ್ದಾರೆ.
ಅಲ್ಲದೆ ಗ್ರಾಮೀಣ ಪ್ರದೇಶದ ಗ್ರಾಮ ಪಂಚಾಯತ್‌ಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಪಕ್ಷದ ಪ್ರಮುಖರು, ಕಾರ್ಯಕರ್ತರು ಹೆಚ್ಚಿ ನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.