ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ದಲ್ಲಿ ಡಿ.11 ರಂದು ನಡೆಯಲಿದೆ.
ಸಂಜೆ 5.30 ರಿಂದ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಕುಂಡಡ್ಕ ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 8 ಗಂಟೆಯಿಂದ ಲಲಿತಾ ಕಲಾ ಸದನ ವಿಟ್ಲ ಇದರ ನೃತ್ಯ ನಿರ್ದೇಶಕಿ ವಿದುಷಿ ನಯನ ಸತ್ಯನಾರಾಯಣ ಇವರ ಶಿಷ್ಯೆಯಿಂದ ಭರತನಾಟ್ಯ ವೈಭವ ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.