ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್‌ಟಿಸಿ ಬಸ್‌ನಲ್ಲಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗುಂಡಿಯನ್ನು ತಪ್ಪಿಸಲು ಹೋದ KSRTC ಚಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ.
ಈ KSRTC ಬಸ್ ಮೈಸೂರಿನಿಂದ ವಿರಾಜಪೇಟೆ ಕಡೆಗೆ ಹೋಗುತ್ತಾ ಇತ್ತು. ತಿತಿಮತಿ ಸಮೀಪದ ದೇವರಪುರದಲ್ಲಿ ಈ ಭೀಕರ ಬಸ್ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂ ಆಗಿದೆ. ಬಸ್ ಚಾಲಕನ ಕಾಲು ಮುರಿದಿದ್ದು, ಗಾಯಾಳುಗಳಿಗೆ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.