ಪುತ್ತೂರು: ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್ ಬುಕ್‌ನಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅದ್ದು ಪಡೀಲ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
‘ಪುತ್ತೂರು ನಗರ ಸಭೆಯ ಅಧ್ಯಕ್ಷೆಯಾಗಿರುವ ಪ.ಜಾತಿಗೆ ಸೇರಿದ ನನ್ನ ಮೇಲೆ ಹಾಗೂ ನಗರ ಸಭೆಯನ್ನು ಅವಮಾನ ಮಾಡುವ ಮತ್ತು ಮಾನಹಾನಿಕರವಾಗಿ ಬರೆಯುತ್ತಿರುವ ಅದ್ದು ಪಡೀಲ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಅದ್ದು ಪಡೀಲ್ ವಿರುದ್ಧ ನಗರ ಠಾಣಾ ಪೊಲೀಸರು ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು.
ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅದ್ದು ಪಡೀಲ್ ಅವರಿಗೆ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.