ಸುಳ್ಯ: ಆನೆ ದಾಳಿಯಿಂದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡ ವ್ಯಕ್ತಿ.
ಅಯ್ಯಪ್ಪ ಮಾಲಧಾರಿ ಯಾಗಿರುವ ಚರಿತ್ ಬೆಳ್ಳಗಿನ ಜಾವ ತೋಡಿನ ಸಮೀಪ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
























