ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿದ್ದು, ಅವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿಯಿರುವ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸುವ ಪಕ್ರಿಯೆಯೂ ಆರಂಭಗೊಂಡಿದ್ದು, ಜನವರಿ 7, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
* ನೇಮಕಾತಿ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
* ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
* ಹುದ್ದೆಗಳ ಸಂಖ್ಯೆ : 13,735
* ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ : 50
* ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ ರೂ 26730 /-
ವಿದ್ಯಾರ್ಹತೆ
ವಿಶ್ವವಿದ್ಯಾಲಯದಿಂದ ಯಾವುದೇ ಪದವಿ
ಮುಖ್ಯವಾದ ದಿನಾಂಕಗಳು
ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ- 17 ಡಿಸೆಂಬರ್ 2024
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ- 7 ಜನವರಿ 2025
ವಯೋಮಿತಿ– 20 ರಿಂದ 28 ವರ್ಷಗಳು
ಆಯ್ಕೆ ಪ್ರಕ್ರಿಯೆ ಈ ರೀತಿ ಇರುತ್ತದೆ
ಪೂರ್ವಭಾವಿ ಪರೀಕ್ಷೆ (Preliminary Exam)
ಮುಖ್ಯ ಪರೀಕ್ಷೆ (Mains Exam) ಭಾಷಾ ಪ್ರಾವೀಣ್ಯತೆ ಪರೀಕ್ಷೆ
(4 ಪ್ರಶ್ನೆಗಳನ್ನು ತಪ್ಪಾಗಿ ಬರೆದರೆ 1 ಅಂಕ ಕಡಿತ ಇರುತ್ತದೆ)
ಅರ್ಜಿ ಶುಲ್ಕ ಎಷ್ಟು ಇದೆ..?
ಜನರಲ್, ಒಬಿಸಿ, ಎಡಬ್ಲುಎಸ್- 750 ರೂಪಾಯಿ
ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಶುಲ್ಕವಿಲ್ಲ
ಅರ್ಜಿ ಸಲ್ಲಿಕೆ ಮಾಡಲು ವೆಬ್ಸೈಟ್- https://ibpsonline.ibps.in/sbidrjadec24/