ಪುತ್ತೂರು: ದಿನಾಂಕ 19.12.2024 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿತೆಯರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ದಿನಾಂಕ 13-12-2024 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ 19-12-2024 ರಂದು ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್ ಭಟ್ ರವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತೆ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.