ಕುಂದಾಪುರ: ಟೈರ್ ಪಂಕ್ಚರ್ ಶಾಪ್ ಒಂದರಲ್ಲಿ ಬಸ್ಸೊಂದರ ಟೈರ್ ಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭ ಟೈರ್ ಸಿಡಿದು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಅಬ್ದುಲ್ ರಶೀದ್ (19) ಗಂಭೀರ ಗಾಯಗೊಂಡ ಯುವಕ.
ಕೋಟೇಶ್ವರದಲ್ಲಿರುವ ಟೈರ್ ಪಂಕ್ಚರ್ ಶಾಪ್ ಗೆ ಖಾಸಗಿ ಶಾಲಾ ಬಸ್ಸೊಂದರ ಟೈರ್ ಪ್ಯಾಚ್ ಗೆ ಬಂದಿತ್ತು. ಈ ವೇಳೆ ಅಬ್ದುಲ್ ರಶೀದ್ ಟೈರನ್ನು ಬಸ್ಸಿನಿಂದ ಕೆಳಗಿಳಿಸಿ ಗಾಳಿ ತುಂಬಿಸಿದ್ದಾರೆ. ಗಾಳಿ ತುಂಬಿಸಿ ರಶೀದ್ ಅಲ್ಲಿಂದ ಎದ್ದೇಳುತ್ತಿದ್ದಂತೆ ಟೈರ್ ಏಕಾಏಕಿ ಸ್ಫೋಟಗೊಂಡಿದೆ.
ಟೈರ್ ಸಿಡಿದ ರಭಸಕ್ಕೆ ರಶೀದ್ ಗಾಳಿಯಲ್ಲಿ ಹಾರಿ ಗಿರಕಿ ಹೊಡೆದು ಬಿದ್ದಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.