ಬೆಂಗಳೂರು: ಹೊಸ ವರ್ಷದಂದೇ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರುಚಿತಾ(24) ಆತ್ಮಹತ್ಯೆಗೆ ಶರಣಾದ ಯುವತಿ. ಇಂದು (ಜ.1) ಮಧ್ಯಾಹ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿರುವ ಪ್ರಖ್ಯಾತ ಫಾರ್ಮಾ ಕಂಪನಿಯಲ್ಲಿ ರುಚಿತಾ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈಗ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.