ಪುತ್ತೂರು: ಟ್ರಾಫಿಕ್ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಪರ್ಲಡ್ಕ ನಿವಾಸಿ ಸಾಮಾಜಿಕ ಕಾರ್ಯಕರ್ತ ಅಲಿ ಪರ್ಲಡ್ಕ ಹಲ್ಲೆಗೊಳಗಾದ ವ್ಯಕ್ತಿ. ಸದ್ಯ ಅವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪರ್ಲಡ್ಕ ಬಳಿ ಟ್ರಾಫಿಕ್ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಲಿ ದೂರಿನಲ್ಲಿ ನಗರ ಠಾಣಾ ಪೊಲೀಸರಿಗೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.