ಪುಣೆ: ಮಹಾರಾಷ್ಟ್ರದ ಪುಣೆಯ ಕಾಲ್ ಸೆಂಟರ್ ಸಿಬ್ಬಂದಿಯನ್ನು ಆಕೆಯ ಸಹೋದ್ಯೋಗಿಯೇ ಕೊಲೆ ಮಾಡಿದ್ದಾರೆ. ಪುಣೆಯ ಬಹುರಾಷ್ಟ್ರೀಯ ಬಿಪಿಒ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 28 ವರ್ಷದ ಮಹಿಳೆ ತನ್ನ ಕಂಪನಿಯ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ಸಹೋದ್ಯೋಗಿ ನಡೆಸಿದ ಮಚ್ಚಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಆಕೆಯ ಕೈಗೆ ತೀವ್ರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಗಾಯಗಳಿಂದಾಗಿ ಯುವತಿ ಸಾವನ್ನಪ್ಪಿದ್ದಾರೆ.
ಈ ಘಟನೆ ಸಂಜೆ ಸುಮಾರು 6.15ಕ್ಕೆ ಯೆರವಡಾದ ಬಿಪಿಒ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಕತ್ರಜ್ ನಿವಾಸಿ 28 ವರ್ಷದ ಶುಭದಾ ಶಂಕರ್ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದಾತ ಶಿವಾಜಿನಗರ ನಿವಾಸಿ 30 ವರ್ಷದ ಕೃಷ್ಣ ಸತ್ಯನಾರಾಯಣ್ ಕನೋಜ.
ಪುಣೆಯಲ್ಲಿ ಬಿಪಿಒ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಮಹಿಳಾ ಲೆಕ್ಕಪರಿಶೋಧಕಿಯೊಬ್ಬಳನ್ನು ಮಂಗಳವಾರ ಸಂಜೆ ಯೆರವಾಡದಲ್ಲಿರುವ ಅವರ ಕಂಪನಿಯ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಸಹೋದ್ಯೋಗಿ ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಈ ದಾಳಿಯಲ್ಲಿ ಕೈಗೆ ಗಂಭೀರ ಗಾಯಗಳಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ.
ಕೊಲೆಯಾದ ಯುವತಿ ಮತ್ತು ದಾಳಿ ಮಾಡಿದಾತ ಇಬ್ಬರೂ ಒಂದೇ ಬಹುರಾಷ್ಟ್ರೀಯ ಬಿಪಿಒ, ಡಬ್ಲ್ಯೂಎನ್ಎಸ್ ಗ್ಲೋಬಲ್‌ನಲ್ಲಿ ಲೆಕ್ಕಪರಿಶೋಧಕರಾಗಿ ಕೆಲಸ ಮಾಡುತ್ತಿದ್ದಾರೆ. “ಗಾಯಗೊಂಡ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾತ್ರಿಯ ನಂತರ ಚಿಕಿತ್ಸೆ ನೀಡಲಾಗುತ್ತಿದ್ದಾಗ ಅವರು ಸಾವನ್ನಪ್ಪಿದರು. ಶಂಕಿತನನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮೃತ ಯುವತಿಗೆ ಸ್ವಲ್ಪ ಹಣವನ್ನು ನೀಡಿದ್ದ. ಆಕೆ ಅದನ್ನು ವಾಪಾಸ್ ಕೊಟ್ಟಿರಲಿಲ್ಲ. ಇದೇ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.” ಎಂದು ಪೊಲೀಸರು ತಿಳಿಸಿದ್ದಾರೆ.