ಬೆಳ್ಳಾರೆ ಪೇಟೆಯಲ್ಲಿ ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿ ಯುವಕನ ತಲೆಗೆ ಗಾಯವಾಗಿ ಸುಳ್ಯ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ರಾತ್ರಿ 9:30 ಸಮಯಕ್ಕೆ ಬೆಳ್ಳಾರೆ ಪೇಟೆಯಲ್ಲಿ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬುವವರು ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.
ಗಾಯಾಳು ಆಶೀರ್ ಬೆಳ್ಳಾರೆಯನ್ನು ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.