ಕಡಬ: ನಿಯಂತ್ರಣ ತಪ್ಪಿ ಬೈಕೊಂದು ಮೋರಿಗೆ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪೇರಡ್ಕ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪೇರಡ್ಕದ ಖಾಸಗಿ ಶಾಲಾ ವಿದ್ಯಾರ್ಥಿ ಆಶೀಶ್ (16) ಎಂದು ಗುರುತಿಸಲಾಗಿದೆ.
ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.