ಎನ್.ಹೆಚ್ – 75 ವ್ಯಾಪ್ತಿಯ ಬಿ.ಸಿ ರೋಡ್ ಜಂಕ್ಷನ್, ಕುದ್ರೆಬೆಟ್ಟು, ಕಲ್ಲಡ್ಕ, ಮಾಣಿ, ಕೆದಿಲ, ಪೆರ್ನೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮತ್ತು ನೀರಕಟ್ಟೆ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಹಾಗೂ ಗುತ್ತಿಗೆದಾರರೊಂದಿಗೆ ಭೇಟಿ ನೀಡಿ ಹೆದ್ದಾರಿ ಕಾಮಗಾರಿಯ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಯಾಯ ಪ್ರದೇಶಕ್ಕೆ ಸಂಬಂಧಪಟ್ಟಂತೆ ಬಂದಿರುವ ಅಹವಾಲುಗಳ ವಾಸ್ತವತೆಯನ್ನು ತಿಳಿದು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ , ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠoದೂರು ಮತ್ತು ಪಾರ್ಟಿಯ ಮುಖಂಡರು ಉಪಸ್ಥಿತರಿದ್ದರು.
