ಪುತ್ತೂರು: ಮಹಾಲಿಂಗೇಶ್ವರ ದೇವಳಕ್ಕೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಮಾಡಿದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ದೇವಸ್ಥಾನದ ಎಕ್ಸಿಕ್ಯೂಟಿವ್ ಆಫೀಸರ್ ಕೆ. ವಿ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾನೆ ಸಮಯದಲ್ಲಿ ರಾಜೇಶ್ ಬನ್ನೂರು ಸಹಿತ 9 ಜನರ ತಂಡ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಮಾಡಿ, ಜಾಗ ಬಿಡುವುದಿಲ್ಲ ಎಂದು ಹೇಳಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ BNS 2023 U/S 189(2) ,191(2),329(3),324(5),351(2),190 ಅಡಿ ಪ್ರಕರಣ ದಾಖಲಾಗಿದೆ.