ಪುತ್ತೂರು: ಯುವ ಕಾಂಗ್ರೆಸ್ ರಾಜ್ಯ ಘಟಕಕ್ಕೆ ನಡೆದ ಅಂತರಿಕ ಚುನಾವಣೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಶ್ರೀ ಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ
ಆಯ್ಕೆಯಾಗಿದ್ದಾರೆ.
ಇವರು 5820 ಮತಗಳನ್ನು ಪಡೆದುಕೊಂಡಿದ್ದಾರೆ. ಪಾಣಾಜೆಯ ನಡುಗಟ್ಟಿ ನಿವಾಸಿಯಾಗಿರುವ ಇವರು ಖಾಸಗಿ ಶಾಲೆಯಲ್ಲಿ 8 ವರ್ಷಗಳ ಕಾಲ ಶಿಕ್ಷಕ ವೃತ್ತಿ ಮಾಡಿದ್ದರು. ಬಳಿಕ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.

ಶ್ರೀಪ್ರಸಾದ್ ಅವರು ಪಾಣಾಜೆ ಲಯನ್ಸ್ ಕ್ಲಬ್ ಪ್ರಧಾನ 2 ಕಾರ್ಯದರ್ಶಿಯಾಗಿ, ವಿದ್ಯಾಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾಗಿ, ಯಾದವ ಸಭಾ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದೆಹಲಿಯಲ್ಲಿ ನಡೆದ ಯಂಗ್ ಇಂಡಿಯಾದ ಕಾರ್ಯಕ್ರಮದಲ್ಲಿ ತನ್ನ ಭಾಷಣದ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಮನಗೆದ್ದಿದ್ದರು.