ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.
ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದು ಗೋವನ್ನು ಸುರಕ್ಷಿತವಾಗಿ ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.