ಪುತ್ತೂರು : ಸರಕಾರದ ಪಾಲನೆಯೊಂದಿಗೆ ಸಮಾಜದ ಸ್ವಾಸ್ಥö್ಯವನ್ನು ನಾವು ಬಯಸಿದಾಗ ಸಮಾಜ ನಮ್ಮನ್ನು ಗುರುತಿಸಲು ಬಯಸುತ್ತದೆ. ಈ ನಿಟ್ಟಿನಲ್ಲಿ ಕೊರೋನಾ ವಾರಿರ‍್ಸ್ಗಳಾಗಿ ಕೆಲಸ ನಿರ್ವಹಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸಹಿತ ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಕೊಂಡಿರುವುದು ಮೆಚ್ಚತಕ್ಕದ್ದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಹಭಾಗಿತ್ವದಲ್ಲಿ ಕೇಂದ್ರ ಸರಕಾರದ “ಪೋಷಣ್ ಅಭಿಯಾನ”ದ ಯೋಜನೆಯಡಿ ಇಲ್ಲಿಯ ಮನಿಷಾ ಸಭಾಂಗಣದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಮೊಬೈಲ್ ಫೋನ್ ವಿತರಣೆ ಹಾಗೂ ಕೊರೋನಾ ವಾರಿರ‍್ಸ್ಗಳಿಗೆ ಗೌರವಾರ್ಪಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ನಾಗರಿಕರ ಆರೋಗ್ಯ ಕಾಳಜಿ ವಹಿಸಿ ಕೊರೋನಾ ವಾರಿಯರ್ಸ್ ಗಳಿಂದಾಗಿ ಇನ್ನೊಂದೆಡೆ ಹಳ್ಳಿ ಹಳ್ಳಿಗಳಲ್ಲೂ ಶಿಕ್ಷಣವನ್ನು ಕೊಡುವ ಕೆಲಸ ಅಂಗನವಾಡಿ ಕಾರ್ಯಕರ್ತರಿಂದ ಆಗಿದೆ. ಅದರಲ್ಲೂ ಮಕ್ಕಳ, ಮಹಿಳೆಯರ ಆರೋಗ್ಯ ಕಾಳಜಿ ತುಂಬಿಸುವ ಕೆಲಸದ ಜತೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಆಗಿದೆ. ಈ ನಿಟ್ಟಿನಲ್ಲಿ ಆಧುನಿಕತೆ ಮೈಗೂಡಿಸಿಕೊಂಡು ಬದಲಾವಣೆ ತರುವ ಕೆಲಸ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ಆಗಬೇಕಾಗಿದೆ. ಇದಕ್ಕಾಗಿ ಮಕ್ಕಳ, ಮಹಿಳಾ ಸನೇಹಿಯಾಗಿರುವ ಸ್ನೇಹ ಆ್ಯಪ್ ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್‌ನ್ನು ಶಾಸಕರು ವಿತರಿಸಿದರು.
ಜಿಲ್ಲಾ ನಿರೂಪಣಾಧಿಕಾರಿ ಶ್ಯಾಮಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಗ್ರಾಮೀಣ ಪ್ರದೇಶದ ಮಹಿಳೆಯರ ಅದರಲ್ಲೂ ಗರ್ಭಿಣಿಯರಲ್ಲಿ ಅಪೌಷ್ಠಿಕಾಂಶ ಹೋಗಲಾಡಿಸಲು ಪೌಷ್ಠಿಕಾಂಶವುಳ್ಳ ಆಹಾರವನ್ನು ವಿತರಿಸುತ್ತಾ ಬಂದಿದ್ದು, ಅಂಗನವಾಡಿಗಳನ್ನು ಮೂಲ ಕೇಂದ್ರವಾಗಿಟ್ಟುಕೊAಡು ಅಂಗನವಾಡಿಗಳ ಎಲ್ಲಾ ಚಟುವಟಿಕೆಗಳನ್ನು ಸ್ಮಾರ್ಟ್ ಫೋನ್ ಮೂಲಕ ನಿರ್ವಹಣೆ ಮಾಡುವ ಉದ್ದೇಶದಿಂದ ವಿತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪೋಷಣ್ ಅಭಿಯಾನದ ಅಂಗವಾಗಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀಲತಾ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಶಿಕ್ಷಣಾಧಿಕಾರಿ ಲೋಕೇಶ್ ಸಿ., ನರೇಗಾ ಯೋಜನೆಯ ಅಧಿಕಾರಿ ಶೈಲಜಾ, ರೋಟರಿ ಯುವ ಅಧ್ಯಕ್ಷ ಡಾ.ಹರ್ಷಕುಮಾರ್ ಮಾಡಾವು, ಉಪಾಧ್ಯಕ್ಷ ಉಮೇಶ್ ನಾಯಕ್ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಇಲಾಖಾಧಿಕಾರಿ ಶ್ರೀಲತಾ ಸ್ವಾಗತಿಸಿದರು. ಹಿರಿಯ ಅಧಿಕಾರಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.