ದೇವನಹಳ್ಳಿ: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುಪಿ ಮೂಲದ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಮೃತರು. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಯುಪಿಯಿಂದ ಬಂದಿದ್ದ ಮೂವರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದಿದ್ದಾರೆ. ಈ ವೇಳೆ ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಹಳಿಗಳ ಮೇಲೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಸತ್ಯ ಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಹಳಿ ಮೇಲಿದ್ದ ಮೃತದೇಹಗಳನ್ನ ಕಂಡು ಸ್ಥಳಿಯರಿಂದ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಯಶವಂತಪುರ ರೈಲ್ವೆ ಪೊಲೀಸರಿಂದ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿ ತನಿಖೆ ಕೈಗೊಳ್ಳಲಾಗಿದೆ.