ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟು, ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಕೆದಂಬಾಡಿ ಗುಡ್ಡೆ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕ ಮಹಮ್ಮದ್ ಅವರ ಎರಡನೇ ಪತ್ನಿ ಜಮೀಲ(49) ಮತ್ತು ಆಕೆಯ ಪುತ್ರಿಯ ಮಗ ತಪ್ಪಿಬ್ (5) ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.