ವಿಟ್ಲ: ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾದ ಘಟನೆ ವಿಟ್ಲದ ಲಾಡ್ಜ್ ಒಂದರಲ್ಲಿ ನಡೆದಿದೆ.
ವಿಟ್ಲ – ಮಂಗಳೂರು ರಸ್ತೆಯ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿರುವ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಒಂದು ವಾರಗಳ ಹಿಂದೆ ಬಂದು ತಂಗಿದ್ದು, ಮಾ.2ರಂದು ಮುಂಜಾನೆ ಲಾಡ್ಜ್ ಸಿಬ್ಬಂದಿ ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೂಡಲೇ ಸಿಬ್ಬಂದಿಗಳು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಗಾಯಾಳುವನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡ ವ್ಯಕ್ತಿ ಕೇರಳ ಮೂಲದ ಸುಜೀಶ್ ಎಂದು ತಿಳಿದು ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.