ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಶಾಂತಿನಗರ ಮೊದಲಾದ ಕಡೆಗಳಲ್ಲಿ ಏರ್ ಟೆಲ್ ಮತ್ತು ಬಿ.ಎಸ್.ಎನ್.ಎಲ್. ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದಾಗಿ ಜನರಿಗೆ ಬಹಳ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರುರವರ ನೇತೃತ್ವದಲ್ಲಿ ಹೋರಾಟ ಸಮಿತಿ ರಚಿಸಲಾಗಿದೆ.
ಜೂ.17ರಂದು ಸೇಡಿಯಾಪು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಹೋರಾಟ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.