ಪುತ್ತೂರು : ಚಿಕ್ಕಪುತ್ತೂರಿನ ಶ್ರೀ ವೀರಭದ್ರ ಮತ್ತು ಆದಿಮಾಯೆ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಏ.29 ಮತ್ತು 30 ರಂದು ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ಮುಖಂಡರಾದ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಅರುಣ್ ಕುಮಾರ್ ಪುತ್ತಿಲ ಹಾಗೂ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ್ ಭಟ್ ಪಂಜಿಗುಡ್ಡೆ , ಮುಳಿಯ ಜ್ಯುವೆಲ್ಸ್ ನ ಎಂ ಡಿ ಕೇಶವ್ ಪ್ರಸಾದ್ ಮುಳಿಯ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಗಣ್ಯರು ಉಪಸ್ಥಿತರಿದ್ದರು.