ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಸಿನಿಮಾದ ನಟಿ ವರಲಕ್ಷ್ಮಿ ಶರತ್ ಕುಮಾರ್ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹೌದು, ಡ್ಯಾನ್ಸ್ ಶೋನಲ್ಲಿ ತಮ್ಮ ಮೇಲೆ ಆದ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ.
ಇತ್ತೀಚೆಗೆ ಸಾಕಷ್ಟು ನಟಿಯರು ತಮ್ಮ ಜೀವನದಲ್ಲಿ ಆದ ಕಹಿ ಘಟನೆ ಬಗ್ಗೆ ಹೇಳುತ್ತಿದ್ದಾರೆ. ಇದೀಗ ಸ್ಟಾರ್ ನಟಿ ವರಲಕ್ಷ್ಮಿ ಶರತ್ ಕುಮಾರ್ ವೇದಿಕೆ ಮೇಲೆ ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ತಮಿಳಿನ ʻಡ್ಯಾನ್ಸ್ ಜೋಡಿ ಡ್ಯಾನ್ಸ್ʼ ಕಾರ್ಯಕ್ರಮದಲ್ಲಿ ತೀರ್ಪುಗಾರ್ತಿಯಾಗಿದ್ದಾರೆ ನಟಿ ವರಲಕ್ಷ್ಮಿ ಶರತ್ ಕುಮಾರ್.
ಇದೇ ವೇಳೆ ವೇದಿಕೆ ಮೇಲೆ ಮಾತಾಡಿದ ಅವರು, ನಿಮ್ಮ ನೋವು ನನಗೆ ಗೊತ್ತು. ನನ್ನ ಹೆತ್ತವರು ಕೆಲಸದಲ್ಲಿ ನಿರತರಾಗಿದ್ದರು. ಆದ್ದರಿಂದ ನಾನು ಮಗುವಾಗಿದ್ದಾಗ ಅವರು ನನ್ನನ್ನು ಮನೆಯಲ್ಲಿಯೇ ಬಿಡುತ್ತಿದ್ದರು. ಆಗ ನನ್ನನ್ನು ಕೆಲವು ದಿನಗಳ ಕಾಲ ಸಂಬಂಧಿಕರ ಮನೆಗೆ ಕಳುಹಿಸಲಾಯಿತು.
ಈ ವೇಳೆ ಐದು ಅಥವಾ ಆರು ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು. ಹೀಗಾಗಿ ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಕಲಿಸಬೇಕು ಎಂದು ಪೋಷಕರಲ್ಲಿ ಬೇಡಿಕೊಳ್ಳುತ್ತೇನೆ ಎಂದಿದ್ದಾರೆ. ಸದ್ಯ ನಟಿ ವರಲಕ್ಷ್ಮಿ ಸದ್ಯ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಕಿಚ್ಚ ಸುದೀಪ್ ನಟನೆಯ ʻಮ್ಯಾಕ್ಸ್ʼ ಸಿನಿಮಾದಲ್ಲಿಯೂ ನಟಿ ನಟಿಸಿದ್ದಾರೆ.