ವಿಟ್ಲ: ಬಾಲಕಿಜೊತೆ ಅಸಭ್ಯವಾಗಿ ವರ್ತಿಸಿದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಣಿಲ ಗ್ರಾಮದ ವ್ಯಕ್ತಿಯೊಬ್ಬ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ ಹಿನ್ನಲೆಯಲ್ಲಿ ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಪ್ರಕರಣ ದಾಖಲಾಗಿದೆ.
16 ವರ್ಷದ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿ, ಕೀಳುಮಟ್ಟದ ಶಬ್ದಗಳನ್ನು ಬಳಸಿದ್ದಾರೆಂಬ ಆರೋಪದಲ್ಲಿ ಮಾಣಿಲ ನಿವಾಸಿ ಮಹೇಶ್ ಭಟ್ ಮೇಲೆ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಮಾಹಿತಿ ಹೊರ ಬರುತ್ತಿದ್ದಂತೆ ಕೃತ್ಯ ಎಸಗಿದಾತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಬಾಲಕಿಯ ಪೋಷಕರು ಕೂಲಿ ಕೆಲಸ ಮಾಡಿಕೊಂಡಿದ್ದು, ಎರಡು ತಿಂಗಳು ಬಾಲಕಿ ಶಾಲೆಗೆ ಹೋಗಿಲ್ಲ ಎಂದು ಹೇಳಲಾಗುತ್ತಿದೆ.
ಸದ್ಯ ವಿಟ್ಲ ಪೊಲೀಸರು ತನಿಖೆ ಮುಂದುವರಿಸಿದ್ದು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.