ಕಾನೂನು ಪಾಲಿಸಬೇಕಾದ ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಪೊಲೀಸ್ ಬೆಲ್ಟ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಯಲಾಗಿದೆ.
ಪತ್ನಿಗೆ ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನಿಸಿರುವ ಆರೋಪದಲ್ಲಿ ಸಿಲುಕಿರುವ ಧರ್ಮಸ್ಥಳ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪತಿ, ಕಿಶೋರ್ ಎಸಗಿರುವ ಕ್ರೌರ್ಯದ ಕುರಿತು ದಾಖಲೆ ಹಾಗೂ ವೈದ್ಯಕೀಯ ವರದಿ ಸಮೇತ ಪೊಲೀಸರಿಗೆ ದೂರು ನೀಡಿರುವ ಅವರ ಪತ್ನಿ ವರ್ಷಾ (27) ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಪಿಎಸ್‌ಐ ಕಿಶೋರ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

























