ಕುವೆಟ್ಟು: ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿ ಮಾರುತಿ ಕಾರು ಚರಂಡಿಗೆ ಬಿದ್ದ ಘಟನೆ ಮಾ. 26ರಂದು ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿ ಇಬ್ಬರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಕಾರು ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಹೆದ್ದಾರಿಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ.

ಘಟನೆ ಪರಿಣಾಮ ಕಾರು ಸಂಪೂರ್ಣ ಹಾನಿಯಾಗಿದ್ದು ಕಾರಿನಲ್ಲಿದ್ದವರಿಗೆ ಯಾವುದೇ ಆಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.



























