Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿಗೆ ಶಾಕ್, 5 ವರ್ಷದ ಬಳಿಕ ಪ್ರಿಯಕರನ ಜತೆ ರೆಡ್​ಹ್ಯಾಂಡ್ ಆಗಿ ಸಿಕ್ಕ ಹೆಂಡತಿ…!!!

April 3, 2025
in ಕ್ರೈಮ್
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಕೊಲೆ ಪ್ರಕರಣವೊಂದಕ್ಕೆ ಇದೀಗ ಭಾರಿ ಟ್ವಿಸ್ಟ್ ದೊರೆತಿದೆ. ಅಷ್ಟೇ ಅಲ್ಲ, ಯಾವ ಸಸ್ಪೆನ್ಸ್​, ಹಾರರ್, ಥ್ರಿಲ್ಲರ್, ರೊಮ್ಯಾಂಟಿಕ್ ಸಿನಿಮಾಗೂ ಕಡಿಮೆ ಇಲ್ಲದ ರೀತಿಯಲ್ಲಿ ಇದೀಗ ಅನಾವರಣಗೊಂಡಿದೆ.

ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಾಕ್ಕಾಗಿ ಗಂಡ ಸುರೇಶ್​ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ.

Advertisement

ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್​ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್​ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ! ಇದನ್ನು ಗಂಡ ಸುರೇಶ್​ನ ಸ್ನೇಹಿತರು ನೋಡಿ, ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ.

Advertisement

ಕೂಡಲೇ ಮಡಿಕೇರಿ ನಗರ ಪೊಲಿಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲೇ ನೋಡಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು.

ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಲಿಗೆ
ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಯುವಕ ಸುಮಾರು 18 ವರ್ಷಗಳ ಹಿಂದೆ ಮಲ್ಲಿಗೆ ಎಂಬಾಕೆಯನ್ನು ವಿವಾಹವಾಗಿರುತ್ತಾರೆ.

ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, 2020 ರ ನವೆಂಬರ್​ನಲ್ಲಿ ಇದ್ದಕ್ಕಿದ್ದಂತೆ ಒಂದಿನ ಪತ್ನಿ ಮಲ್ಲಿಗೆ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಶ್ ​ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.

ಪೊಲಿಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ. ಹಾಗಾಗಿ ಎಲ್ಲರೂ ಸುಮ್ಮನಾಗಿದ್ದರು. ಪತ್ನಿ ಗಣೇಶ್​ ಎಂಬಾತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಓಡಿ ಹೋಗಿರುವುದು ಗೊತ್ತಿದ್ದರೂ ಸುರೇಶ್​ ಮನನೊಂದು ಸುಮ್ಮನಾಗಿದ್ದರು.

ಆದರೆ ಸುರೇಶ್​ಗೆ ದುರಾದೃಷ್ಟ ವಕ್ಕರಿಸಿತು. 2021ರ ಜೂನ್​ ಮೂರನೇ ವಾರದಲ್ಲಿ ಕುಶಾಲನಗರಕ್ಕೆ ಖಾಸಗಿ ಕಾರಿನಲ್ಲಿ ಒಂದಷ್ಟು ಮಂದಿ ಪೊಲೀಸರು ಬಂದಿದ್ದಾರೆ. ಬಂದವರು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲಿಸ್ ಠಾಣೆಯ ಸಿಬ್ಬಂದಿಯಾಗಿರುತ್ತಾರೆ.

ಅವರು ಸುರೇಶನನ್ನು ಬರ ಹೇಳಿ, ಮಹಿಳೆಯೊಬ್ಬಳ ಮೃತದೇಹ ಸಿಕ್ಕಿದೆ, ಬಂದು ಗುರುತುಪತ್ತೆ ಮಾಡು ಎಂದು ಬಲವಂತದಿಂದ ಬೆಟ್ಟದಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಯಾವುದೋ ಮಹಿಳೆಯ ಸೀರೆ ಲಂಗ, ಒಳ ಉಡುಪು ಚಪ್ಪಲಿ ಎಲ್ಲಾ ತೋರಿಸಿ, ‘ಇದು ನಿನ್ನದೇ ಹೆಂಡತಿಯದ್ದು. ನೀನೇ ಕೊಲೆ ಮಾಡಿದ್ದೀ, ಒಪ್ಪಿಕೋ’ ಎಂದು ಚಿತ್ರ ಹಿಂಸೆ ಕೊಟ್ಟಿದ್ದರಂತೆ. ಇದೇ ಪ್ರಕರಣದಲ್ಲಿ 18-07-2021ರಲ್ಲಿ ಬೆಟ್ಟದಪುರ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿ ನಂತರ ಅವರು ಜೈಲು ಸೇರಿದ್ದಾರೆ.

ಜೈಲುಪಾಲಾದ ಸುರೇಶ್​ಗೆ ಮೈಸೂರಿನ ಪಾಂಡು ಪೂಜಾರಿ ಎಂಬ ವಕೀಲರ ರೂಪದಲ್ಲಿ ಸಹಾಯ ಬರುತ್ತದೆ. 2022ರ ಜನವರಿಯಲ್ಲಿ ವಕೀಲರ ಕೊರಿಕೆ ಮೇರೆಗೆ ಮಲ್ಲಿಗೆ ಅಸ್ತಿ ಪಂಜರ ಹಾಗೂ ಆಕೆಯ ತಾಯಿಯ ರಕ್ತದ ಮಾದರಿ ಸಂಗ್ರಹಿಸಿ ಡಿಎನ್​ಎ ಪರೀಕ್ಷೆಗೆ ಕಳುಹಿಸಲಾಗುತ್ತದೆ.

ಆದರೆ ಅಲ್ಲಿ ಬೆಟ್ಟದಪುರ ಪೊಲಿಸರು ಮಲ್ಲಿಗೆಯದ್ದು ಎಂದು ಪ್ರತಿಪಾದಿಸಿದ ದೇಹ ಆಕೆಯದ್ದಲ್ಲ ಎಂಬ ವರದಿ ಬರುತ್ತದೆ. ಆದರೂ ಬೆಟ್ಟದಪುರ ಪೊಲೀಸರು ಸುರೇಶನನ್ನು ಎರಡು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿರುತ್ತಾರೆ. ಇದಾದ ಬಳಿಕ ವಕೀಲ ಪಾಂಡು, ಹರಸಾಸಹಪಟ್ಟು ಹೈಕೋರ್ಟ್​ ಮೊರೆ ಹೋಗಿ 2024ರಲ್ಲಿ ಸುರೇಶ್​​ ಅವರನ್ನು ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು.

ಇಷ್ಟೆಲ್ಲ ಆದ ಬಳಿಕ, ಕೊಲೆಯಾಗಿರುವ ಮಹಿಳೆ ತನ್ನ ಹೆಂಡತಿಯಲ್ಲ. ತಾನು ಕೊಲೆ ಮಾಡಿಲ್ಲ, ಹೆಂಡತಿಯನ್ನು ಹುಡುಕಿಕೊಡಿ ಎಂದು ಸುರೇಶ್ ಮತ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.

ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ ಮಲ್ಲಿಗೆ ಜೀವಂತವಾಗಿ ಮಡಿಕೇರಿ ಹೋಟೆಲ್​​ನಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ ಹಾಗೂ ಅವರ ಸ್ನೇಹಿತರ ಕಣ್ಣಿಗೆ ಬಿದ್ದಿದೆ. ಈ ಅವಕಾಶ ಬಿಟ್ಟರೆ ಮತ್ತೆ ಸಿಗಲ್ಲ ಎಂದು ಯೋಚಿಸಿದ ಸುರೇಶ್​ ಮತ್ತು ಆತನ ಸ್ನೇಹಿತರು ಮಡಿಕೇರಿ ಪೊಲಿಸರ ಸಹಾಯ ಪಡೆದು ಮಲ್ಲಿಗೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತನ್ನ ಪ್ರಿಯಕರ ಗಣೇಶನ ಜೊತೆ ವಿರಾಜಪೇಟೆ ತಾಲ್ಲೂಕಿನ ಶೆಟ್ಟಿಗೇರಿ ಗ್ರಾಮದಲ್ಲಿ ವಾಸವಿರುವುದಾಗಿ ಹೇಳಿದ್ದಾಳೆ.

ಸದ್ಯ ಮಲ್ಲಿಗೆಯನ್ನು ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಬೆಟ್ಟದಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ವಕೀಲ ಪಾಂಡು ಅವರ ಶ್ರಮದಿಂದಾಗಿ ಮಲ್ಲಿಗೆಯನ್ನು ಇದೀಗ ಮೈಸೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯ ಇದೀಗ ಸುಳ್ಳು ಆರೋಪ ಪಟ್ಟಿ ದಾಖಲಿಸಿದ ಬೆಟ್ಟದಪುರ ಠಾಣೆ ತನಿಖಾಧಿಕಾರಿ, ಮೈಸೂರು ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದೆ.

ಕುಶಾಲನಗರ ಗ್ರಾಮಾಂತರ ಠಾಣಾ ಪೊಲಿಸರು ಯಾಕೆ ಮಲ್ಲಿಗೆಯನ್ನು ಹುಡುಕಲಿಲ್ಲ, ಇತ್ತ ಬೆಟ್ಟದ ಪುರ ಠಾಣೆ ಪೊಲಿಸರು ಯಾವುದೋ ಮಹಿಳೆಯ ಮೃತದೇಹವನ್ನು ಮಲ್ಲಿಗೆಯದ್ದೇ ದೇಹ ಎಂದು ಯಾಕೆ ಕೇಸ್ ದಾಖಲಿಸಿದ್ದರು, ಹಾಗೆಯೇ ಅಂದು ಪತ್ತೆಯಾದ ದೇಹ ಯಾರದ್ದು, ಆಕೆಯನ್ನು ಯಾರು ಕೊಲೆ ಮಾಡಿದ್ದು ಈ ಎಲ್ಲಾ ವಿಚಾರಗಳು ಇದೀಗ ಹೊಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

ಹಾಗೇಯೇ ಈ ಮೂಲಕ ಅಮಾಯಕ ಆದಿವಾಸಿ ಸುರೇಶ್​ ಮತ್ತು ಆತನ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ.

Previous Post

ಫೋಟೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್​: ಸಿರಾಜ್​​ ಕಾಟಕ್ಕೆ ವಿದ್ಯಾ ಆತ್ಮಹತ್ಯೆಗೆ ಯತ್ನ..!!

Next Post

ಬೆಳಾಲು ಕಾಡಿನಲ್ಲಿದ್ದ ಮಗುವಿನ ತಂದೆ ತಾಯಿ ಪತ್ತೆ | ಅಕ್ರಮ ಸಂಬಂಧದ ಹಿನ್ನಲೆ ಹೆದರಿ ಕಾಡಿಗೆ ಬಿಟ್ಟಿರುವುದಾಗಿ ಹೇಳಿಕೆ | ವಾರದೊಳಗೆ ಮದುವೆಗೆ ನಿರ್ಧಾರ…!!!!!!

OtherNews

ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!
Featured

ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

August 31, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

August 30, 2026
9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!
Featured

9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

August 30, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

August 30, 2026
ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!
Featured

ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

August 30, 2026
ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!
Featured

ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

August 30, 2026

Leave a Reply Cancel reply

Your email address will not be published. Required fields are marked *

Recent News

ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವರಿಗೆ ಸ್ವರ್ಣ ಸಮರ್ಪಣೆ..!

ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವರಿಗೆ ಸ್ವರ್ಣ ಸಮರ್ಪಣೆ..!

September 1, 2026
ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

August 31, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

August 30, 2026
ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

August 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.