ಬೆಳ್ತಂಗಡಿ: 12 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್‌ಡಿಎಂ ಕಾಲೇಜ್‌ನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಕೂಡಲೇ ಅಕ್ಸಿಟಲ್ ಕಮಿಟಿ ರಚಿಸಬೇಕು ಎಂದು ಆಗ್ರಹಿಸಿ ಎಪ್ರಿಲ್ 6ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಿಂದ ಬೃಹತ್ ಜಾಥಾ ನಡೆದು ಬಳಿಕ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ
ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅಕ್ವಿಟಲ್ ಕಮಿಟಿ ರಚಿಸಲು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಎರಡೆರಡು ಬಾರಿ ಆದೇಶ ನೀಡಿದರು ಕೂಡ ರಾಜ್ಯ ಸರ್ಕಾರ ಇಲ್ಲಿಯವರೆಗೂ ಅಕ್ವಿಟಲ್ ಕಮಿಟಿ ರಚಿಸದೆ ಸೌಜನ್ಯಾಳಿಗೆ ಅನ್ಯಾಯ ಮಾಡುತ್ತಿದೆ.
ಇದರ ಇದರ ವಿರುದ್ದ ಎ.6ರಂದು ಪೂರ್ವಾಹ್ನ 10 ಗಂಟೆಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸಮೀಪ ಸೌಜನ್ಯ ಮೃತದೇಹ ಸಿಕ್ಕಿದ್ದ ಮಣ್ಣಸಂಕದಿಂದ
ಬೃಹತ್ ಜಾಥಾ ಪ್ರಾರಂಭಗೊಂಡು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ.
ತಕ್ಷಣ ಅಕ್ವಿಟಲ್ ಕಮಿಟಿ ರಚಿಸಿ ಸೌಜನ್ಯಾಳಿಗೆ ಮೋಸ ಮಾಡಿದ ಪೋಲಿಸರು ಮತ್ತು ವೈದ್ಯಾಧಿಕಾರಿಗಳನ್ನು ತನಿಖೆ ನಡೆಸಲು ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.